Prajanudi
ನ್ಯೂಸ್ ರಾಜ್ಯ

ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯ; ನಿಯಮ ಸಡಿಲಿಸಲು ರಾಜ್ಯ ಸರ್ಕಾರ ಚಿಂತನೆ


ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನೀಡಬೇಕೆಂಬ ನಿಯಮವನ್ನು ರಾಜ್ಯ ಸರ್ಕಾರ ಸಡಿಲಿಸುವ ಸಾಧ್ಯತೆಯಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪ್ರಕಾರ, ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕೆಂಬ ನಿಯಮಕ್ಕೆ ಶಾಲೆಗಳಿಗೆ ವಿನಾಯ್ತಿ ನೀಡಿತ್ತು.
ಇದೀಗ ರಾಜ್ಯ ಸರ್ಕಾರ ಅದನ್ನು ಜಾರಿಗೆ ತರಲು ಹಿಂದಿನ ಆದೇಶವನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ.
ಈ ಕುರಿತು ನಿನ್ನೆ ಸಮಾರಂಭದಲ್ಲಿ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಎನ್ ಮಹೇಶ್, ನಾವು ಪರಿಶೀಲಿಸಿ ಆದೇಶವನ್ನು ಪರಿಷ್ಕರಿಸುತ್ತೇವೆ ಎಂದರು.
ವಿದ್ಯಾರ್ಥಿಗಳ ಸಾಧನೆ ಪತ್ತೆ ವ್ಯವಸ್ಥೆ(ಸ್ಯಾಟ್ಸ್) ಅಡಿಯಲ್ಲಿ ವಿದ್ಯಾರ್ಥಿಗಳ ವಿವರ ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಾವು ಆಧಾರ್ ಸಂಖ್ಯೆ ಕಡ್ಡಾಯ ನಿಯಮವನ್ನು ತೆಗೆದುಹಾಕಬಹುದು. ಇನ್ನು ಮುಂದೆ 6ರಿಂದ 14 ವರ್ಷದೊಳಗಿನ ವಿದ್ಯಾರ್ಥಿಗಳು ಶಾಲೆಗಳಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಾಗಿಲ್ಲ ಎಂದರು.

Related posts

ಪೇಶಾವರ ಶಾಲೆ ಮೇಲಿನ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ: ಪಾಕಿಸ್ತಾನ

Prajanudi Admin

ವಿಜಯಪುರ: ಲೈಂಗಿಕ ಕಿರುಕುಳ ಬಹಿರಂಗಪಡಿಸಿದ್ದ ಅಪ್ರಾಪ್ತೆಗೆ ಬೆಂಕಿ?

Prajanudi Admin

ಮಿಜೋರಾಂ: ರಾಜ್ಯಪಾಲರನ್ನು ಭೇಟಿ ಮಾಡಿದ ಎಂಎನ್ ಎಫ್ ಮುಖ್ಯಸ್ಥ, ಸರ್ಕಾರ ರಚನೆ ಹಕ್ಕು ಮಂಡನೆ

Prajanudi Admin

Leave a Comment