Prajanudi
ಕ್ರೀಡೆ

ಟಾಕ್ ಷೋನಲ್ಲಿ ಅಸಭ್ಯ ಹೇಳಿಕೆ: ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಗೆ ನಿಷೇಧ ಶಿಕ್ಷೆ?


ಮುಂಬೈ: ಖ್ಯಾತ ಟಾಕ್ ಷೋವೊಂದರಲ್ಲಿ ಬಾಯಿಗೆ ಬಂದಂತೆ ಅಸಭ್ಯ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ 2 ಎಕದಿನ ಪಂದ್ಯಗಳ ನಿಷೇಧ ಹೇರಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.ಹೌದು ಇತ್ತೀಚೆಗ ಮುಕ್ತಾಯವಾದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಬಳಿಕ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೆಂಗಸರ ಬಗ್ಗೆ ಅಸಭ್ಯವಾಗಿ ಪೋಲಿ ಮಾತುಗಳಾಡಿದ್ದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ಬಿಸಿಸಿಐ 2 ಏಕದಿನ ಪಂದ್ಯಗಳ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಸಿಸಿಐ ನೀಡಿರುವ ಶೋಕಾಸ್ ನೋಟಿಸ್ ಗೆ ಹಾರ್ದಿಕ್ ಪಾಂಡ್ಯಾ ಪ್ರತಿಕ್ರಿಯೆ ನೀಡಿ ಬಹಿರಂಗ ಕ್ಷಮೆಯಾಚಿಸಿದ್ದರೂ, ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರಾಯ್ ಅವರು ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಗೆ 2 ಏಕದಿನ ಪಂದ್ಯಗಳ ನಿಷೇಧ ಹೇರುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಮಾತನಾಡಿದ ಅವರು ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯೆ ತಮಗೆ ಸಮಾಧಾನ ತಂದಿಲ್ಲ. ಓರ್ವ ವೃತ್ತಿಪರ ಕ್ರಿಕೆಟಿಗನಾಗಿ ಅವರ ಬಾಯಿಂದ ಇಂತಹ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ವಿನೋದ್ ರಾಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಆದರೆ ಈ ಪ್ರಕರಣವನ್ನು ಬಿಸಿಸಿಐ ಆಡಳಿತ ಮಂಡಳಿ ಸದಸ್ಯೆ ಡಯಾನಾ ಎಡುಲ್ಜಿ ಅವರು ಕಾನೂನು ಸಮಿತಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಿಸಿಸಿಐನ ಕಾನೂನು ಸಮಿತಿ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಹಾರ್ದಿಕ್ ರಾಹುಲ್ ಭವಿಷ್ಯ ನಿರ್ಧಾರವಾಗಲಿದೆ.

Related posts

ಕೊಹ್ಲಿಯಲ್ಲ, ಎಬಿಡಿವಿಲಿಯರ್ಸ್ ಅಲ್ಲ, ಚೇಸಿಂಗ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯೇ 'ಕಿಂಗ್'

Prajanudi Admin

ಅಮಿತ್ ಭಂಡಾರಿ ಹಲ್ಲೆ ಪ್ರಕರಣ: ಕ್ರಿಕೆಟಿಗ ಅನುಜ್‌ಗೆ ಅಜೀವ ನಿಷೇಧ

Prajanudi Admin

ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರು, ಸ್ಟಂಪಿಂಗ್‌ನಲ್ಲಿ ಎಂಎಸ್ ಧೋನಿ ಮಿಂಚು, ವಿಡಿಯೋ ವೈರಲ್!

Prajanudi Admin

Leave a Comment