Prajanudi
ನ್ಯೂಸ್ ರಾಜ್ಯ

ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿ ಮೂವರ ಹತ್ಯೆಗೆ ಸಂಚು: ಗುಪ್ತಚರ ಇಲಾಖೆ


ಮಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿದಂತೆ ಮೂವರು ಹಿಂದೂ ಪರ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಪೊಲೀಸರು, ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭದ್ರತೆ ನೀಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಎದುರಿಸುತ್ತಿರುವ ವಿಶ್ವಹಿಂದೂ ಪರಿಷತ್ ಮುಖಂಡರಾದ ಜಗದೀಶ್ ಶೇಣವರಿ ಮತ್ತು ಭಜರಂಗದಳದ ಶರಣ್‌ ಪಂಪ್‌ವೆಲ್‌ ಅವರಿಗೆ ಎಚ್ಚರದಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.ಇಂದು ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ತೆರಳಬೇಕಾಗಿದ್ದ ಪ್ರಭಾಕರ್‌ ಭಟ್‌ ಅವರು ಸುರಕ್ಷತೆಯ ದೃಷ್ಟಿಯಿಂದ ವಿಮಾನ ಮೂಲಕ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿದೆ. ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಗುಪ್ತಚರ ಇಲಾಖೆ ಬಂಧಿಸಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.

Related posts

ರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ

Prajanudi Admin

ಪರೀಕ್ಷೆ ಎದುರಿಸುವುದು ಬಿಟ್ಟು ಪಂಜಾಬ್ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಪ್ರಧಾನಿ ತೆರಳಿದ್ದಾರೆ: ರಾಹುಲ್ ವ್ಯಂಗ್ಯ

Prajanudi Admin

ಮೂಡಿಗೆರೆ: ಹೆಂಡಕ್ಕೆ ಹಣ ಕೊಡದ ತಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಪುತ್ರ!

Prajanudi Admin

Leave a Comment