Prajanudi
ನ್ಯೂಸ್ ರಾಜ್ಯ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಯುವಕನ ಆತ್ಮಹತ್ಯೆ ಯತ್ನ


ಬೆಂಗಳೂರು: ಮೆಟ್ರೋ ರೈಲು ಆಗಮಿಸುತ್ತಿದ್ದಂತೆಯೇ ಹಳಿ ಮೇಲೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.ಮೂಲಗಳ ಪ್ರಕಾರ ಬೆಳಗ್ಗೆಯಿಂದ ರೈಲ್ವೇ ನಿಲ್ದಾಣದಲ್ಲೇ ಇದ್ದ ಯುವಕ ರೈಲು ಹಳಿಗೆ ಆಗಮಿಸುತ್ತಿದಂತೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ರೈಲು ಚಾಲಕ ಬ್ರೇಕ್ ಹಾಕಿದ್ದು, ಹಳಿಗೆ ಹಾರಿದ ರಭಸಕ್ಕೆ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ಪ್ರಸ್ತುತ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರಿದ ಯುವಕ ಯಾರು ಎನ್ನುವ ಮಾಹಿತಿ ಲಭ್ಯವಾಗಿಲ್ಲ.ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಇಂತಹ ಘಟನೆ ನಡೆದಿದ್ದು, ಇದರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಯುವಕ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಯಲಚೇನಹಳ್ಳಿ ಕಡೆ ಹೋಗುವ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಕೆ.ಆರ್. ಮಾರುಕಟ್ಟೆಯಲ್ಲಿ ಪ್ರಯಾಣಿಕರನ್ನು ರೈಲಿನಿಂದ ಇಳಿಸಲಾಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಕಾದ ಪ್ರಯಾಣಿಕರು ನಿರಾಸೆಯಿಂದ ತೆರಳಿದ್ದಾರೆ. 

Related posts

ಉಗ್ರ ಪಟ್ಟಿಗೆ ಮಸೂದ್ ಸೇರ್ಪಡೆಗೆ ಚೀನಾ ಅಡ್ಡಿ: ಸಂಯಮದಿಂದ ಪ್ರಯತ್ನ ಮುಂದುವರೆಸುತ್ತೇವೆ ಎಂದ ಭಾರತ

Prajanudi Admin

ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪ್ರಗತಿಯಲ್ಲಿ, ಮೊಬೈಲ್ ಇಂಟರ್ ನೆಟ್ ಸ್ಥಗಿತ

Prajanudi Admin

ಕೆಆರ್ ಎಸ್ ಹಿನ್ನೀರಿನಲ್ಲಿ ಎಸ್ ಯುವಿ ವಾಹನ ಚಾಲನೆ: ಯುವಕನ ವಿರುದ್ಧ ಎಫ್ಐಆರ್ ದಾಖಲು

Prajanudi Admin

Leave a Comment