• Home
  • ಸ್ಥಳೀಯ
  • ನಿಗದಿತ ಅವಧಿಯ ಒಳಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ
ಸ್ಥಳೀಯ

ನಿಗದಿತ ಅವಧಿಯ ಒಳಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಅ-05 : ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು, ನಿಗದಿತ ಅವಧಿಯ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಅನುಷ್ಟಾನದ ಪ್ರಗತಿ ಪರಿಶೀಲನೆ ನಡೆಸಿದರು.

ಪ್ರತಿಯೊಂದು ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಸ್ಮಾರ್ಟ್ ಸಿಟಿ, ಅಮೃತ್ ಯೋಜನೆ, ಕರ್ನಾಟಕ ನಗರ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ಮಂಡಳಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರತಿ ತಿಂಗಳು ಯೋಜ£ಂiÀÉಯ ಪ್ರಗತಿ ಪರಿಶೀಲನೆ ನಡೆಸಲಾಗುವುದು. ನಿಗಧಿಪಡಿಸಲಾದ ಮಾಸಿಕ ಪ್ರಗತಿಯನ್ನು ಸಾಧಿಸಬೇಕು. ಕಾಮಗಾರಿ ಅನುಷ್ಟಾನದಲ್ಲಿ ತೊಡಕು ಉಂಟಾದರೆ ಸ್ಥಳೀಯವಾಗಿ ಬಗೆಹರಿಸಿಕೊಳ್ಳಬೇಕು. ಯಾರಾದರೂ ಅಡಚಣೆ ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ. ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸ್ಮಾರ್ಟ್ ಸಿಟಿ ಕಾಮಗಾರಿ ಅನುಷ್ಟಾನಕ್ಕೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರಗತಿ ವಿವರ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಇದುವರೆಗೆ ಎರಡು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 54ಕೋಟಿ ರೂ. ವೆಚ್ಚ ಮಾಡಲಾಗಿದೆ. 731 ಕೋಟಿ ರೂ. ವೆಚ್ಚದಲ್ಲಿ ಒಟ್ಟು 27 ಕಾಮಗಾರಿಗಳು ಪ್ರಗತಿಯಲ್ಲಿವೆ. 14 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. ಪ್ರತಿ ಕಾಮಗಾರಿ ಅನುಷ್ಟಾನದ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಶೋಕ ಹೋಟೇಲ್‍ನಿಂದ ಅಲ್ಕೋಳ ವೃತ್ತದವರೆಗಿನ ಸ್ಮಾರ್ಟ್ ರಸ್ತೆ ಕಾಮಗಾರಿ ನಡೆಯುತ್ತಿದೆ. ಗ್ರಾಮೀಣ ಪೊಲೀಸ್ ಠಾಣೆ ಬಳಿ ಸುಮಾರು 200ಮೀಟರ್ ಸ್ಥಳ ಬಿಟ್ಟು ಕೊಡಲು ಇಲಾಖೆ ಒಪ್ಪಿಕೊಂಡಿದ್ದು, ಪೈಪ್‍ಲೈನ್ ಕಾಮಗಾರಿ ಒಂದು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ. 2.7ಕಿಮಿ ಉದ್ದದ ಹೆರಿಟೇಜ್ ವಾಕ್ ಕಾಮಗಾರಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ತುಂಗಾ ನದಿ ದಂಡೆಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ. ಇಮಾಂಬಾಡದಲ್ಲಿ ಈಗಾಗಲೇ 32 ಮನೆಗಳಿಗೆ ಬೇರೆ ಕಡೆ ಹಕ್ಕುಪತ್ರ ನೀಡಲಾಗಿದ್ದು, ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಟಾರೆ, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು

 

 

Related posts

ಜನ್ಮಪಡೆದ ಸ್ಥಳದಲ್ಲಿ ನಾಡಹಬ್ಬಕ್ಕೆ ಚಾಲನೆ : ತವರು ಮನೆಯ ಸಂಭ್ರಮ -ಹಿರಿಯ ಸಂಶೋಧಕ, ನಿವೃತ್ತ ಪ್ರಾಧ್ಯಾಪಕ ಕೆ.ಎಸ್ ಕುಮಾರಸ್ವಾಮಿ

Kannadigara Prajanudi

ಮುಂದಿನ ವರ್ಷದಿಂದ ಶಿಕಾರಿಪುರದಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ – ಪ್ರೊ. ಬಿ ಪಿ ವೀರಭದ್ರಪ್ಪ

Kannadigara Prajanudi

ವನಜಾ ಶೆಟ್ಟಿ ನಿಧನ

Kannadigara Prajanudi

Leave a Comment