ಕುರ್ಚಿ ಉಳಿಸಿಕೊಳ್ಳಲು ಯತ್ನ: ಜಾತಿಗಣತಿ ವರದಿ ವಿವಾದದಿಂದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ..!
- Apr 8
- 1 min read
Updated: Apr 24

ಬೆಂಗಳೂರು: ಜಾತಿ ಜನಗಣತಿ ಎಂದು ಕರೆಯಲ್ಪಡುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ (SEES-2015) ವರದಿಯು ಕೆಲವು ಸಮುದಾಯಗಳು ವಿಶೇಷವಾಗಿ ವೀರಶೈವ ಲಿಂಗಾಯತರು ಮತ್ತು ಒಕ್ಕಲಿಗರ ಸಮುದಾಯಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಈ ವಿವಾದವು ಇದೀಗ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬರುವಂತೆ ಮಾಡುತ್ತಿದೆ.
ಸಮೀಕ್ಷಾ ವರದಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
2023 ರಲ್ಲಿ ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಾಗ ಮಾಡಿಕೊಂಡ ಒಪ್ಪಂದದ ಪ್ರಕಾರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರವನ್ನು ವರ್ಗಾಯಿಸದಿರಲು ಸಿದ್ದರಾಮಯ್ಯ ಅವರು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ.

Comments