Mangalore International Airport: ಮಹಿಳೆ ಅನುಮಾನಾಸ್ಪದ ತಿರುಗಾಟ, ಪೊಲೀಸ್ ವಶಕ್ಕೆ!
- Apr 4
- 1 min read
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಭದ್ರತಾ ಸಿಬ್ಬಂದಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ.

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಭದ್ರತಾ ಸಿಬ್ಬಂದಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ.
ಸುಮಾರು 23 ವರ್ಷದ ಮಹಿಳೆಯನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತಡೆದು ಸುರಕ್ಷಿತವಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಜ್ಪೆ ಪೊಲೀಸರ ಪ್ರಕಾರ, ಬೆಳಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂದಿದ್ದ ಮಹಿಳೆ ಬಳಿಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಳು.
ಆಕೆ ತನ್ನ ಮೂಲಸ್ಥಾನವನ್ನು ದಾವಣಗೆರೆ ಎಂದೂ ಹೇಳಿಕೊಂಡಿದ್ದಳು. ನಾಲ್ಕು ದಿನಗಳ ಹಿಂದೆ ದಾವಣಗೆರೆಯಲ್ಲಿ ಆಕೆಯ ಸಂಬಂಧಿಕರು ನಾಪತ್ತೆ ದೂರು ದಾಖಲಿಸಿದ್ದರು. ಇದೀಗ ಆಕೆ ಮಂಗಳೂರಿನಲ್ಲಿ ಸಿಕ್ಕಿದ್ದಾರೆ ಎಂದು ಹೇಳಿದ್ದಾರೆ.
ಡಿಸೆಂಬರ್ 2023ರಲ್ಲಿ ದಾಖಲೆಯ ಸಂಖ್ಯೆ ಪ್ರಯಾಣಿಕರನ್ನು ನಿಭಾಯಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಪೊಲೀಸರು ಆಕೆಯನ್ನು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದು, ಆಕೆಯ ಸುರಕ್ಷತೆಯ ಬಗ್ಗೆ ಸಂಬಂಧಿಕರಿಗೆ ತಿಳಿಸಲಾಗಿದೆ. ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಶಂಕಿಸಲಾಗಿದ್ದು, ಪೋಷಕರು ಆಗಮಿಸುತ್ತಿದ್ದಂತೆಯೇ ಅವರಿಗೆ ಒಪ್ಪಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಸ್ವತಂತ್ರವಾಗಿ ತಿರುಗಾಡುತ್ತಿರುವ ಎರಡನೇ ಘಟನೆ ಇದಾಗಿದ್ದು, ಮಂಗಳೂರು ನಗರದ ಕದ್ರಿಯಿಂದ ಮಹಿಳೆಯೊಬ್ಬರು ಮೇ 14 ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ನಂತರ ಭದ್ರತಾ ಸಿಬ್ಬಂದಿ ಆಕೆಯನ್ನು ಅವರ ಕುಟುಂಬದೊಂದಿಗೆ ಸೇರಿಸಿದ್ದರು.

Comments