top of page

ತುಮಕೂರಿನಲ್ಲಿ ಏರ್ಪಡಿಸಿದ್ದ ಕೆ.ಎನ್. ರಾಜಣ್ಣ ಅವರ ೭೫ನೇ ಜನ್ಮ ದಿನ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಡಿ.ಕೆ.ಶಿವಕುಮಾರ್, ರಾಜಣ್ಣ, ಚಲುವರಾಯಸ್ವಾಮಿ ಮುಂತಾದ ಪ್ರಮುಖರು ಇದ್ದರು...

ree

ರೈತರ ಸಾಲ ಮನ್ನಾದ ಶ್ರೇಯಸ್ಸು ರಾಜಣ್ಣನವರಿಗೆ ಸಲ್ಲಬೇಕು

ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಸಿಎಂ ಸಿದ್ದರಾಮಯ್ಯ


ತುಮಕೂರು: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಭೇದವಿಲ್ಲದೆ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಎನ್. ರಾಜಣ್ಣ ಅವರ ೭೫ನೇ ಜನ್ಮ ದಿನ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯನ್ನು ತೊಲಗಿಸಿ ಎಲ್ಲರನ್ನು ಮುಖ್ಯವಾಹಿನಿಗೆ ತರಬೇಕು ಎನ್ನುವುದೇ ನಿಜವಾದ ರಾಜಕೀಯ ಗುರಿ. ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಮನುಷ್ಯತ್ವ ಎನ್ನುವುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದು ಇದ್ದಾಗ ಮಾತ್ರ ಸಮಸಮಾಜ, ಬದಲಾವಣೆ ತರಲು ಸಾಧ್ಯವಾಗುತ್ತದೆ. ಇದಾಗಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಯನ್ನು ತುಂಬಬೇಕು. ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ÷್ಯ ಸಾರ್ಥಕವಾಗಬೇಕಾದರೆ ಎಲ್ಲರೂ ಸ್ವಾವಂಬಿಗಳಾಗಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ವೈರುಧ್ಯತೆ ಇರುವ ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ ಸಮಸಮಾಜ ನಿರ್ಮಾಣವಾಗದೆ ಹೋದರೆ ಪ್ರಜಾಪ್ರಭುತ್ವದ ಸೌಧವನ್ನು ಜನರೇ ಧ್ವಂಸ ಮಾಡುತ್ತಾರೆ ಎಂದೂ ಕೂಡ ಹೇಳಿದ್ದರು ಎಂದು ಸ್ಮರಿಸಿದರು.

ಸಾಲ ಮನ್ನಾ ಕಾರ್ಯಕ್ರಮದ ಶ್ರೇಯಸ್ಸು ರಾಜಣ್ಣನವರಿಗೆ ಸಲ್ಲಬೇಕು

ರೈತರು ಸಾಲ ಮನ್ನಾ ಮಾಡಬೇಕೆಂದು ಒತ್ತಡ ತಂದಿದ್ದ ಸಂದರ್ಭದಲ್ಲಿ ೫೦ ಸಾವಿರ ರೂ.ಗಳ ವರೆಗೆ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕುಗಳಲ್ಲಿ ರೈತರ ಸಾಲದ ಸಂಪೂರ್ಣ ವಿವರಗಳನ್ನು ನೀಡಿದವರು ರಾಜಣ್ಣ. ಅವರಿಲ್ಲದೇ ಹೋಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅವಧಿಯಲ್ಲಿ ಸಾಲ ಮನ್ನಾ ಮಾಡಿದ್ದರ ಪೈಕಿ ೩೦೦ ಕೋಟಿಗಳು ಬಾಕಿಯಿದ್ದು, ರೈತರ ಕಾರ್ಯಕ್ರಮವಾಗಿರುವುದರಿಂದ ಇದನ್ನು ಮುಂದಿನ ದಿನಗಳಲ್ಲಿ ಚುಕ್ತಾ ಮಾಡಲಾಗುವುದು ಎಂದು ತಿಳಿಸಿದರು.

ಇದರ ಶ್ರೇಯ ರಾಜಣ್ಣನವರಿಗೆ ಸೇರಬೇಕಾಗಿದ್ದರೂ ಕುಮಾರಸ್ವಾಮಿಯವರು ಪಡೆದರು. ರಾಜಣ್ಣ ನೇರ ನಡೆ ನುಡಿಯವರು, ನಿಸ್ಪöÈಹವಾಗಿ ಮಾತನಾಡುವವರು. ಈ ಗುಣಗಳು ಸ್ವಾಭಿಮಾನದ ಸಂಕೇತ. ಸ್ವಾಭಿಮಾನವಿದ್ದವರು ಮೇಲೆ ಬರುತ್ತಾರೆ ಎಂದರು.

ರಾಜಕೀಯದಲ್ಲಿ ಸೋಲು-ಗೆಲುವು ಸಾಮಾನ್ಯ. ನಾನೂ ಕೂಡ ನಾಲ್ಕು ಬಾರಿ ಸೋತು, ಒಂಭತ್ತು ಬಾರಿ ಗೆದ್ದಿದ್ದೇನೆ. ಸೋತರೂ, ಗೆದ್ದರೂ ಬದ್ಧತೆಯಿರುವ ವಿಚಾರಗಳಲ್ಲಿ ಯಾವುದೇ ಕಾರಣಕ್ಕೂ ಮರೆಯದೇ, ವಿಚಲಿತರಾಗಬಾರದು. ಇದನ್ನು ಮಾಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹುಟ್ಟು ಸಾವಿನ ನಡುವೆ ಬದುಕಿನ ಸಾರ್ಥಕಗೊಳಿಸಿಕೊಳ್ಳಬೇಕು. ಹುಟ್ಟಿದ ಮೇಲೆ ನನ್ನ ಜೀವನ ಸಾರ್ಥಕವಾಗಿದೆಯೇ ಎಂದು ಹಿಂದಿರುಗಿ ನೋಡಬೇಕು. ನಿಮಗೆ ನಿಮ್ಮ ಬದುಕು ಸಮಾಧಾನ ತಂದು ಕೊಡುವಂತಿರಬೇಕು. ರಾಜಣ್ಣನವರದ್ದು ಸಾರ್ಥಕ ಬದುಕು ಎಂದರು.

ಇದೇ ಸಂದರ್ಭದಲ್ಲಿ ರಾಜಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಅವರು, ನೂರು ವರ್ಷಗಳಿಗೂ ಹೆಚ್ಚು ಕಾಲ ಬಾಳಲಿ ಎಂದು ಹಾರೈಸಿದರು.

ಖಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ಎನ್. ಚಲುವರಾಯಸ್ವಾಮಿ, ಮುನಿಯಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕೆ.ಎನ್.ರಾಜಣ್ಣ ಅವರ ಕುಟುಂಬ ವರ್ಗ ಉಪಸ್ಥಿತರಿದ್ದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page