top of page

Russia vs Ukraine: ರಷ್ಯಾ ಮೇಲೆ ಉಕ್ರೇನ್ ಭಾರೀ ಡ್ರೋನ್ ದಾಳಿ: 9/11 ನಂತಹ ಅಟ್ಯಾಕ್​ಗೆ ಬೆಚ್ಚಿಬಿದ್ದ ಕಜಾನ್ ಜನತೆ

ಉಕ್ರೇನ್‌ನ 8 ಸ್ಫೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಮೋದಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.

ree

ಕೀವ್: ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ರಷ್ಯಾಗೆ ಡ್ರೋಣ್ ದಾಳಿ ಮೂಲಕ ಉಕ್ರೇನ್ ತಿರುಗೇಟು ನೀಡಿದ್ದು, ಉಕ್ರೇನ್ ದಿಢೀರ್ ಕ್ರಮಕ್ಕೆ ರಷ್ಯಾದ ಕಜಾನ್ ಜನತೆ ಬೆಚ್ಚಿ ಬಿದ್ದಿದ್ದಾರೆ.

ಉಕ್ರೇನ್‌ನ 8 ಸ್ಫೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಮೋದಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.

ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಆದರೆ ಕಟ್ಟಡಗಳು ವ್ಯಾಪಕವಾಗಿ ಹಾನಿಗೊಳಗಾಗಿರುವುದಾಗಿ ವರದಿಗಳು ತಿಳಿಸಿವೆ.

ದಾಳಿಯಲ್ಲಿ 3 ಕಟ್ಟಡಗಳು ಹಾನಿಗೊಳಗಾಗಿದ್ದು, ಜನರನ್ನು ಅಲ್ಲಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಆಡಳಿತವು ಜನರಿಗೆ ಊಟ, ಬಟ್ಟೆಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.

ದಾಳಿಯ ನಂತರ ಕಜನ್ ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಮತ್ತು ಇಝೆವ್ಸ್ಕ್ ವಿಮಾನ ನಿಲ್ದಾಣದಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ರಷ್ಯಾದ ವಾಯುಯಾನ ವಾಚ್‌ಡಾಗ್ ರೊಸಾವಿಯಾಟ್ಸಿಯಾ ಹೇಳಿದ್ದಾರೆ.


ಕಜನ್ ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯು ಕಜಾನ್ ನಗರದಲ್ಲಿ ಡ್ರೋನ್ ಅನ್ನು ಉರುಳಿಸಿದ್ದು, ಕೆಲವು ಡ್ರೋನ್​ಗಳು ಅದನ್ನು ಭೇದಿಸಿ ದಾಳಿ ನಡೆಸಿವೆ ಎಂದು ತಿಳಿಸಿದೆ.

ಈ ನಡುವೆ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗುತ್ತಿವೆ. ವೈರಲ್ ಆಗಿರುವ ವಿಡಿಯೋ ಸೆಪ್ಟೆಂಬರ್ 11, 2001ರಂದು ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿದ ಘಟನೆಯನ್ನು ಸ್ಮರಿಸುವಂತಿದೆ.

ಸೆಪ್ಟೆಂಬರ್ 11, 2001ರಂದು ಅಮೆರಿಕಗೆ ಅಲ್‌ಕೈದಾ ಉಗ್ರ ಸಂಘಟನೆ ಶಾಕ್‌ ಕೊಟ್ಟಿದ್ದರು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು.

ಅಲ್‌ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು.

ಶುಕ್ರವಾರ ರಾತ್ರಿ ಕೈವ್ ಮತ್ತು ಉಕ್ರೇನ್‌ನ ಇತರ ನಗರಗಳ ಮೇಲೆ ರಷ್ಯಾ ದಾಳಿ ಮಾಡಿದ ನಂತರ ಈ ಡ್ರೋನ್ ದಾಳಿ ನಡೆದಿದೆ. ಕೈವ್‌ನಲ್ಲಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ವಸತಿ ಪ್ರದೇಶಗಳನ್ನು ಹೊಡೆದಿದ್ದರಿಂದ ರಷ್ಯಾ ಉಕ್ರೇನಿಯನ್ ನಗರಗಳ ಮೇಲೆ 60 ಡ್ರೋನ್‌ಗಳು ಮತ್ತು ಐದು ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಂದು ಸಾವು ವರದಿಯಾಗಿದ್ದು, ಅನೇಕ ಜನರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page