top of page

ಅಧಿವೇಶನದ ಮಧ್ಯೆಯೇ ದಿಢೀರ್​ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

  • Apr 8
  • 1 min read

ವಿಜಯೇಂದ್ರ ಅವರು ಸುಮಾರು 15 ನಿಮಿಷಗಳ ಕಾಲ ಮೋದಿ ಜೊತೆ ಚರ್ಚಿಸಿದ್ದು, ರಾಜ್ಯದಲ್ಲಿನ ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಆಗುತ್ತಿರುವ ಮುಜುಗರವನ್ನು ಮೋದಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ree

ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿ ತೆರಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ನಂತರ ಬಿವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ವಿರುದ್ಧ ಅಸಮಾಧಾನವನ್ನ ಹೊರ ಹಾಕುತ್ತಿದೆ. ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪಟ್ಟು ಹಿಡಿದಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ.

ಜನವರಿಯಲ್ಲಿ ಮಹತ್ವದ ಬದಲಾವಣೆಗಳು ಆಗಲಿದೆ ಎಂದು ಯತ್ನಾಳ್​ ಟೀಂ ಹೇಳುತ್ತಿದೆ. ಮತ್ತೊಂದೆಡೆ ಯಾವುದೇ ಶೋಕಾಸ್ ನೋಟಿಸಿಗೂ ಬಗ್ಗದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಟೀಂ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆಯೂ, ಯಡಿಯೂರಪ್ಪ ಕುಟುಂಬದ ವಿರುದ್ದ ವಾಗ್ದಾಳಿ ಮುಂದುವರಿಸಿದೆ.


ಈ ಎಲ್ಲಾ ಬೆಳವಣಿಗೆಗಳ ಮಧ್ಯ ವಿಜಯೇಂದ್ರ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ವಿಜಯೇಂದ್ರ ಅವರು ಸುಮಾರು 15 ನಿಮಿಷಗಳ ಕಾಲ ಮೋದಿ ಜೊತೆ ಚರ್ಚಿಸಿದ್ದು, ರಾಜ್ಯದಲ್ಲಿನ ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಡ್ಯಾಮೇಜ್, ಭಿನ್ನರ ಹೇಳಿಕೆಯಿಂದಾಗಿ, ಕಾಂಗ್ರೆಸ್ ಸರ್ಕಾರದ ಎದುರು ಆಗುತ್ತಿರುವ ಮುಜುಗರವನ್ನು ಮೋದಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಯತ್ನಾಳ್ ಬಣ ಪಟ್ಟು ಹಿಡಿದಿದ್ದು, ಹೈಕಮಾಂಡ್ ಭೇಟಿಗೆ ಸಮಯ ಸಿಗದಿದ್ದಕ್ಕೆ ಯತ್ನಾಳ್ ನೇತೃತ್ವದ ರೆಬೆಲ್ಸ್​ ಟೀಂ ವಾಪಸ್ ಆಗಿತ್ತು. ಆದರೆ ಇದೀಗ ದಿಢೀರ್ ವಿಜಯೇಂದ್ರ ಮೋದಿಯವರನ್ನು ಭೇಟಿಯಾಗುವ ಮೂಲಕ ಪಕ್ಷದ ವರಿಷ್ಠರು ನನ್ನ ಪರವಾಗಿದ್ದಾರೆ ಎಂಬ ಸಂದೇಶವನ್ನು ವಿರೋಧಿಗಳಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page