top of page

ಅಮೆರಿಕದ ಮತ್ತೊಂದು ಉನ್ನತ ಹುದ್ದೆಗೆ ಅನಿವಾಸಿ ಭಾರತೀಯ ಜೈ ಭಟ್ಟಾಚಾರ್ಯ ನೇಮಕ! ದೃಢಪಡಿಸಿದ ಸೆನೆಟ್

  • Apr 8
  • 1 min read

ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದ ಆರೋಗ್ಯ ನೀತಿಯ ಪ್ರಾಧ್ಯಾಪಕ ಭಟ್ಟಾಚಾರ್ಯ ಅವರು ಮಂಗಳವಾರ 53-47 ಮತಗಳಿಂದ ದೃಢಪಟ್ಟಿದ್ದಾರೆ ಎಂದು ಯುಎಸ್ ಸೆನೆಟ್‌ನ ಅಧಿಕೃತ ವೆಬ್‌ಸೈಟ್ ತಿಳಿಸಿದೆ.

ree

ವಾಷಿಂಗ್ಟನ್: ಅಮೆರಿಕದ ಉನ್ನತ ಆರೋಗ್ಯ ಸಂಶೋಧನೆ ಮತ್ತು ಧನಸಹಾಯ ಸಂಸ್ಥೆಗಳಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ನ (NIH)ನಿರ್ದೇಶಕರಾಗಿ ಭಾರತೀಯ-ಅಮೆರಿಕನ್ ವಿಜ್ಞಾನಿ ಜೈ ಭಟ್ಟಾಚಾರ್ಯ ಅವರ ನೇಮಕವನ್ನು US ಸೆನೆಟ್ ದೃಢಪಡಿಸಿದೆ.

ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದ ಆರೋಗ್ಯ ನೀತಿಯ ಪ್ರಾಧ್ಯಾಪಕ ಭಟ್ಟಾಚಾರ್ಯ ಅವರು ಮಂಗಳವಾರ 53-47 ಮತಗಳಿಂದ ದೃಢಪಟ್ಟಿದ್ದಾರೆ ಎಂದು ಯುಎಸ್ ಸೆನೆಟ್‌ನ ಅಧಿಕೃತ ವೆಬ್‌ಸೈಟ್ ತಿಳಿಸಿದೆ.

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಭಟ್ಟಾಚಾರ್ಯರನ್ನು 18 ನೇ ಎನ್‌ಐಎಚ್ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿದ್ದರು.

ಡಾ. ಭಟ್ಟಾಚಾರ್ಯ ಅವರು ರಾಬರ್ಟ್ ಎಫ್ ಕೆನಡಿ ಜೂನಿಯರ್ ಅವರ ಜೊತೆಗೆ ರಾಷ್ಟ್ರದ ವೈದ್ಯಕೀಯ ಸಂಶೋಧನೆಯನ್ನು ನಿರ್ದೇಶಿಸಲು ಮತ್ತು ಆರೋಗ್ಯವನ್ನು ಸುಧಾರಿಸುವ, ಜೀವಗಳನ್ನು ಉಳಿಸುವ ಪ್ರಮುಖ ಆವಿಷ್ಕಾರಗಳನ್ನು ಮಾಡಲು ಕೆಲಸ ಮಾಡುತ್ತಾರೆ ಎಂದು ಟ್ರಂಪ್ ಹೇಳಿದ್ದರು.

"ದೃಢೀಕರಿಸಿದರೆ ಅಮೆರಿಕ ಆರೋಗ್ಯವನ್ನು ಮತ್ತಷ್ಟು ಸುಧಾರಿಸುವ ಅಧ್ಯಕ್ಷ ಟ್ರಂಪ್ ಮತ್ತು (ಆರೋಗ್ಯ ಮತ್ತು ಮಾನವ ಸೇವೆ) ಕಾರ್ಯದರ್ಶಿ ಕೆನಡಿಯವರ ಅಜೆಂಡಾವನ್ನು ಕೈಗೆತ್ತಿಕೊಳ್ಳುತ್ತೇನೆ. ವಿಜ್ಞಾನ ಮತ್ತು ನಾವೀನ್ಯತೆಯೊಂದಿಗೆ ದೇಶದ ತೀವ್ರ ದೀರ್ಘಕಾಲದ ಆರೋಗ್ಯ ಅಗತ್ಯಗಳನ್ನು ಪರಿಹರಿಸಲು NIHಗೆ ಬದ್ದವಾಗಿರುವುದಾಗಿ ಜೈ ಭಟ್ಟಾಚಾರ್ಯ ಹೇಳಿದ್ದಾರೆ.

ಭಟ್ಟಾಚಾರ್ಯ ಅವರ ನೇಮಕಕ್ಕೆ "ಹೆಮ್ಮೆಯಿಂದ" ಸ್ಟ್ಯಾನ್‌ಫೋರ್ಡ್ ಮೆಡಿಸಿನ್ಅಭಿನಂದಿಸಿದೆ ಮತ್ತು ಸಾರ್ವಜನಿಕ ಸೇವೆಗೆ ಅವರ ಬದ್ಧತೆಯನ್ನು "ಶ್ಲಾಘನೀಯ" ಎಂದು ಕರೆದಿದೆ. ಒಂದು ಸಂಸ್ಥೆಯಾಗಿ ನಾವು NIH ಮಿಷನ್‌ನ ದೃಢವಾದ ಬೆಂಬಲಿಗರಾಗಿದ್ದೇವೆ. ಇದು ವೈದ್ಯಕೀಯ ಜ್ಞಾನದ ಗಡಿಗಳನ್ನು ಮುಂದುವರಿಸಲು ಮತ್ತು ಆರೋಗ್ಯ ಸುಧಾರಣೆಗೆ ಹೊಸ ಆವಿಷ್ಕಾರಗಳನ್ನು ಮುಂದುವರೆಸಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page