top of page

ಕೆಟ್ಟದಾಗಿ ಮಾತನಾಡಿದಳು ಅಂತ 'Instagram Friend' ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರ ಕದ್ದು ಪರಾರಿ!

  • Apr 8
  • 1 min read

ತಮಿಳುನಾಡಿನ ಕೃಷ್ಣಾಪುರಂನ 10ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಇನ್‌ಸ್ಟಾಗ್ರಾಮ್‌ ಸ್ನೇಹಿತನೊಬ್ಬ ಚಾಕುವಿನಿಂದ ಕತ್ತು ಸೀಳಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.

ree

ಚೆನ್ನೈ: ತಮಿಳುನಾಡಿನ ಕೃಷ್ಣಾಪುರಂನ 10ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಇನ್‌ಸ್ಟಾಗ್ರಾಮ್‌ ಸ್ನೇಹಿತನೊಬ್ಬ ಚಾಕುವಿನಿಂದ ಕತ್ತು ಸೀಳಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.

15 ವರ್ಷದ ಬಾಲಕಿ Instagram ಮೂಲಕ ಅದೇ ಪ್ರದೇಶದ 12ನೇ ತರಗತಿ ಓದುತ್ತಿರುವ 17 ವರ್ಷದ ಬಾಲಕನೊಂದಿಗೆ ಸಂಪರ್ಕ ಸಾಧಿಸಿದ್ದಳು. ಫೆಬ್ರವರಿ 23ರ ರಾತ್ರಿ, ಆ ಹುಡುಗ ರಾತ್ರಿ 10 ಗಂಟೆ ಸುಮಾರಿಗೆ ಬಾಲಕಿಯನ್ನು ಮನೆಯಿಂದ ಹೊರಗೆ ಕರೆದಿದ್ದಾನೆ. ಹೊರಗೆ ಬಂದಾಗ ಆಕೆಯ ಮೇಲೆ ಚಾಕುವಿನಿಂದ ದಾಳಿ ಮಾಡಿ ಅವಳ ಕತ್ತು ಸೀಳಿ ನಂತರ ಆಕೆಯ ಕತ್ತಿನಲ್ಲಿದ್ದ 12 ಗ್ರಾಂ ಚಿನ್ನದ ಸರವನ್ನು ದೋಚಿದನು.

ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಬಂದ ಬಾಲಕಿ ಮನೆಗೆ ಹೋಗಿದ್ದಾಳೆ. ಮಗಳ ಸ್ಥಿತಿಯನ್ನು ಕಂಡು ಪೋಷಕರು ಆಘಾತಕ್ಕೊಳಗಾಗಿದ್ದು ಕೂಡಲೇ ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆಕೆಯ ತಂದೆಯ ದೂರಿನ ಮೇರೆಗೆ, ಬಾಲವಿದುತ್ತಿ ಪೊಲೀಸರು ಪ್ರಕರಣ ದಾಖಲಿಸಿ ಹುಡುಗನನ್ನು ಬಂಧಿಸಿದ್ದಾರೆ. ಆತನ ಮೂವರು ಸ್ನೇಹಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ಕರೂರ್ ಪೊಲೀಸರ ಪ್ರಕಾರ, ಹುಡುಗಿ ತನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಳೆ ಎಂಬ ಆರೋಪದ ಮೇಲೆ ಹುಡುಗನ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಧಿಕೃತ ಹೇಳಿಕೆಯಲ್ಲಿ, ಪೊಲೀಸರು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ನಿರಾಕರಿಸಿದ್ದಾರೆ. ಸಾಮೂಹಿಕ ಅತ್ಯಾಚಾರದ ವರದಿಗಳನ್ನು ಕೆಲವು ಮಾಧ್ಯಮಗಳು ಹರಡುತ್ತಿರುವ "ಸುಳ್ಳು ಸುದ್ದಿ" ಎಂದು ಹೇಳಿದ್ದಾರೆ. ಸದ್ಯ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page