top of page

ಕಳೆದ ರಾತ್ರಿ ಏನಾಯ್ತು ಕೊಹ್ಲಿಗೆ?....; ಮೊದಲ ಏಕದಿನ ಪಂದ್ಯದಿಂದ Virat Kohli ಔಟ್.. ಕಾರಣ ನೀಡಿದ ನಾಯಕ ರೋಹಿತ್ ಶರ್ಮಾ!

  • Apr 8
  • 1 min read

ಫಾರ್ಮ್ ಕಳೆದುಕೊಂಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳುವ ವಿಶ್ವಾಸವಿತ್ತು. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದಾರೆ.

ree

ನಾಗ್ಪುರ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಕೈಬಿಡಲಾಗಿದ್ದು, ಏಕದಿನ ಸರಣಿಗಾಗಿ ರಣಜಿ ಟ್ರೋಫಿ ಸರಣಿಯನ್ನು ಮೊಟಕುಗೊಳಿಸಿ ನಾಗ್ಪುರಕ್ಕೆ ಬಂದಿದ್ದ ಕೊಹ್ಲಿಯನ್ನು ಪಂದ್ಯದಿಂದ ಕೈಬಿಟ್ಟಿದ್ದೇಕೆ ಎಂಬ ಪ್ರಶ್ನೆ ಕಾಡುತ್ತಿದೆ.

ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಒಂದು ರೀತಿಯ ಅಭ್ಯಾಸದ ಸರಣಿ ಎನಿಸಿಕೊಂಡಿರುವ ಈ ಮೂರು ಪಂದ್ಯಗಳ ಸರಣಿಯು ಉಭಯ ತಂಡಗಳ ಅತ್ಯಂತ ಪ್ರಮುಖ ಸರಣಿಯಾಗಿದ್ದು, ಫಾರ್ಮ್ ಕಳೆದುಕೊಂಡಿರುವ ಭಾರತದ ಸ್ಟಾರ್ ಬ್ಯಾಟರ್ ಗಳಿಗೆ ಇದು ಅತ್ಯಂತ ಪ್ರಮುಖ ಅವಕಾಶವಾಗಿದೆ.

ಈ ಸರಣಿಯಲ್ಲಿ ಫಾರ್ಮ್ ಕಳೆದುಕೊಂಡಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳುವ ವಿಶ್ವಾಸವಿತ್ತು. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗುವ ಮೂಲಕ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದಾರೆ.

ಇಷ್ಟಕ್ಕೂ ಕೊಹ್ಲಿಯನ್ನು ಕೈಬಿಟ್ಟಿದ್ದೇಕೆ? ರೋಹಿತ್ ಶರ್ಮಾ ಹೇಳಿದ್ದೇನು?

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಇದೀಗ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಮೂಲಕ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದರು. ಆದರೆ ಟಾಸ್ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮೊದಲ ಏಕದಿನ ಪಂದ್ಯಕ್ಕೆ ದುರಾದೃಷ್ಟವಶಾತ್ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕೊಹ್ಲಿಗೆ ಗಾಯದ ಸಮಸ್ಯೆ

ಇದೇ ವೇಳೆ ಕೊಹ್ಲಿ ಅಲಭ್ಯತೆಗೂ ಕಾರಣ ತಿಳಿಸಿರುವ ರೋಹಿತ್ ಶರ್ಮಾ, ಕಳೆದ ರಾತ್ರಿ ಕೊಹ್ಲಿ ಬಲಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ದುರಾದೃಷ್ಟವಶಾತ್ ಇಂಗ್ಲೆಂಡ್ ಎದುರಿನ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಇದೇ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಬದಲಿಗೆ ಯಶಸ್ವಿ ಜೈಸ್ವಾಲ್ ಭಾರತ ಏಕದಿನ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಇದೇ ವೇಳೆ ವೇಗದ ಬೌಲರ್ ಹರ್ಷಿತ್ ರಾಣಾ ಕೂಡಾ ಏಕದಿನ ಕ್ರಿಕೆಟ್ ಮಾದರಿಗೆ ಪಾದಾರ್ಪಣೆ ಮಾಡಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page