top of page

ಗುಜರಾತ್‌: ಶಾರುಖ್‌ ಖಾನ್‌ ಬಂಗಲೆಗೆ ನುಗ್ಗಿದ್ದ ವ್ಯಕ್ತಿ ಕಳ್ಳತನದ ಆರೋಪದ ಮೇಲೆ ಬಂಧನ!

  • Apr 8
  • 1 min read

ನಗರದಲ್ಲಿರುವ ನಿವೃತ್ತ ಯೋಧರೊಬ್ಬರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಸ್ವರೂಪ್ ಕುಶ್ವಾಹ(21) ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ree

ಭರೂಚ್‌: 2023 ರಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮನ್ನತ್ ಬಂಗಲೆಗೆ ಅಕ್ರಮವಾಗಿ ಪ್ರವೇಶಿಸಿದ್ದ ವ್ಯಕ್ತಿಯನ್ನು ಗುಜರಾತ್‌ನ ಭರೂಚ್‌ನಲ್ಲಿ ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ನಗರದಲ್ಲಿರುವ ನಿವೃತ್ತ ಸೇನಾ ಜವಾನರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಸ್ವರೂಪ್ ಕುಶ್ವಾಹ(21) ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಆರೋಪಿ ಮತ್ತು ಇನ್ನೊಬ್ಬ ವ್ಯಕ್ತಿ ನಾಲ್ಕು ದಿನಗಳ ಹಿಂದೆ ಮನೆಗೆ ನುಗ್ಗಿ 2.74 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಸಿಕೆ ಪಟೇಲ್ ತಿಳಿಸಿದ್ದಾರೆ.


ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ನಟ ಶಾರುಖ್ ಖಾನ್ ಅವರ ಮನ್ನತ್ ಬಂಗಲೆಯ ಹೈ ಸೆಕ್ಯುರಿಟಿಯನ್ನು ಭೇದಿಸಿದ್ದೆ ಎಂದು ಕುಶ್ವಾಹ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ನಟನ ಭದ್ರತಾ ಸಿಬ್ಬಂದಿ ಆತನನ್ನು ಮತ್ತು ಆತನ ಜೊತೆಗಿದ್ದ ವ್ಯಕ್ತಿಯನ್ನು ಹಿಡಿದಿದ್ದರು.

ಮೋನಾ ಪಾರ್ಕ್ ಸೊಸೈಟಿಯ ಮನೆಯಲ್ಲಿ ನಡೆದ ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ ಕುಶ್ವಾಹ ಮತ್ತು ಮಿನ್ಹಾಜ್ ಸಿಂಧಾ ಅವರನ್ನು ಭರೂಚ್ ಬಿ ವಿಭಾಗದ ಪೊಲೀಸರು ಬಂಧಿಸಿದ್ದಾರೆ. "ನಾವು ಅವರ ಬಳಿಯಿಂದ 2.74 ಲಕ್ಷ ರೂ. ಮೌಲ್ಯದ ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದೇವೆ" ಎಂದು ಪಟೇಲ್ ಹೇಳಿದ್ದಾರೆ.

ಮಾರ್ಚ್ 2, 2023 ರಂದು ಶಾರುಖ್ ಖಾನ್ ಅವರ ಮುಂಬೈ ಮನೆಯ ಹೊರಗಿನ ಗೋಡೆಯನ್ನು ಹತ್ತಿ ಮನೆಯೊಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದ ಇಬ್ಬರನ್ನು ಪೊಲಲೀಸರು ಬಂಧಿಸಿದ್ದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page