top of page

ದೆಹಲಿ ಚುನಾವಣೆ ಗೆಲುವು: BJP ಕಛೇರಿಯಲ್ಲಿ ಸಂಭ್ರಮಾಚರಣೆ; ಕೇಜ್ರಿವಾಲ್‌ ಮುಖವಾಡ ಕಳಚಿದೆ ಎಂದ ವಿಜಯೇಂದ್ರ

  • Feb 8
  • 1 min read


ree











ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಮತಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಈಗಾಗಲೇ ಬಹುಮತಕ್ಕಿಂತ ಹೆಚ್ಚಿನ ಸಂಖ್ಯೆಯ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಈ ಬೆಳವಣಿಗೆ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗುವಂತೆ ಮಾಡಿದೆ.

ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಸಲಾಗುತ್ತಿದ್ದು, ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಸಂಭ್ರಮಾಚರಣೆ ವೇಳೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, 27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿಯಲ್ಲಿ ಅಭೂತಪೂರ್ವ ಗೆಲುವು ದೊರೆತಿದೆ. ದೆಹಲಿಯ ಪಕ್ಷದ ಎಲ್ಲಾ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.ಇದೇ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕಿಡಿಕಾರಿರುವ ಅವರು, ಭ್ರಷ್ಟ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಮುಖವಾಡ ಕಳಚಿದೆ. ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ತಿಳಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page