top of page

ನವ ಭಾರತದಲ್ಲಿ ಲೋಕಸಭೆ ವಿಪಕ್ಷ ನಾಯಕನಿಗೆ ಮಾತನಾಡಲು ಅವಕಾಶವೇ ಇಲ್ಲ: ರಾಹುಲ್ ಗಾಂಧಿ

  • Apr 8
  • 1 min read

ಮಹಾಕುಂಭ ಮೇಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ನಂತರ ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.

ree

ನವದೆಹಲಿ: ಪ್ರಜಾಸತಾತ್ಮಕ ವ್ಯವಸ್ಥೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ಮಾತನಾಡಲು ಅವಕಾಶ ನೀಡಬೇಕು ಆದರೆ, ನವ ಭಾರತದಲ್ಲಿ ಮಾತನಾಡುವುದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮಹಾಕುಂಭ ಮೇಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ನಂತರ ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.

ಬಳಿಕ ಸಂಸತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜನವರಿ 29 ರಂದು ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಸಲ್ಲಿಸಬೇಕು ಎಂದರು.ಪ್ರಧಾನಿ ಮೋದಿ ಹೇಳಿದನ್ನು ನಾನು ಬೆಂಬಲಿಸಲು ಬಯಸುತ್ತೇನೆ. ಕುಂಭ ನಮ್ಮ ಸಂಪ್ರದಾಯ, ಐತಿಹಾಸಿಕ ಮತ್ತು ಸಂಸ್ಕೃತಿ. ಆದರೆ, ಮಹಾಕುಂಭ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಸಲ್ಲಿಸಲಿಲ್ಲ ಎಂಬ ದೂರು ಕೇಳಿಬಂದಿದೆ ಎಂದರು.

ನಾನು ಹೇಳಲು ಬಯಸುವ ಇನ್ನೊಂದು ವಿಷಯವೆಂದರೆ ಕುಂಭಕ್ಕೆ ಹೋದ ಯುವಕರಿಗೆ ಪ್ರಧಾನಿಯಿಂದ ಉದ್ಯೋಗ ಬೇಕು. ಉದ್ಯೋಗದ ಬಗ್ಗೆ ಪ್ರಧಾನಿ ಮಾತನಾಡಬೇಕು ಎಂದು ಕಾಂಗ್ರೆಸ್ ನಾಯಕ ಹೇಳಿದರು.ಮಾತನಾಡಲು ಅವಕಾಶ ನೀಡಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ನಮಗೆ ಮಾತನಾಡಲು ಅವಕಾಶವಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ ನಾಯಕನಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ ಅವಕಾಶ ನೀಡಿಲ್ಲ. ಇದು ನವ ಭಾರತ ಎಂದು ಗಾಂಧಿ ಹೇಳಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page