top of page

ಪ್ರಯಾಣಿಕರಿಗೆ ಶಾಕ್!: Namma Metro ಪ್ರಯಾಣ ದರದಲ್ಲಿ ಭಾರಿ ಏರಿಕೆ, ನಾಳೆಯಿಂದಲೇ ಜಾರಿ

  • Feb 8
  • 1 min read
ree









ಬೆಂಗಳೂರು: Namma Metro ಪ್ರಯಾಣ ದರ ಕೊನೆಗೂ ಏರಿಕೆಯಾಗಿದ್ದು ಈ ಬಗ್ಗೆ BMRCL ಅಧಿಕೃತ ಆದೇಶ ಪ್ರಕಟಿಸಿದೆ.

ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದೆ. ಪ್ರಯಾಣ ದರ ಕನಿಷ್ಠ 10 ರೂಗಳಿಂದ 90 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಪ್ರಯಾಣ ದರದ ಬಗ್ಗೆ ಚರ್ಚೆ ಸಭೆಗಳು ನಡೆದಿತ್ತು. 8 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಯಾಣ ದರ ಏರಿಕೆಯಾಗಿದೆ.ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ದೇಶದ ಇತರ ರಾಜ್ಯಗಳು, ಸಿಂಗಪುರದ ಮೆಟ್ರೋ ಪರಿಷ್ಕರಣೆ ಕ್ರಮವನ್ನು ಅಧ್ಯಯನ ಮಾಡಿ ದರ ಪರಿಷ್ಕರಣೆ ಮಾಡಿದೆ. 2017 ರಲ್ಲಿ 10% -15%ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಮೆಟ್ರೋ ಕಾಮಗಾರಿಗಾಗಿ ಸಾಲದ ಮೇಲಿನ ಬಡ್ಡಿ, ಕಾರ್ಯಾಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂದು ಅಧಿಕಾರಿಗಳು ಹೇಳಿದ್ದರು.

ಇತ್ತೀಚೆಗೆ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿತ್ತು. ಈಗ ಅಂತಿಮವಾಗಿ ದರ ಏರಿಕೆ ಮಾಡಲಾಗಿದೆ. ವಿಶೇಷ ದಿನಗಳಲ್ಲಿ, ನಾನ್ ಪೀಕ್ ಅವರ್‌ಗಳಲ್ಲಿ, ಡಿಸ್ಕೌಂಟ್ ನೀಡಲು ಸಮಿತಿ ಶಿಫಾರಸು ಮಾಡಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page