top of page

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

  • Apr 4
  • 1 min read

ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.


ree










ಬೆಂಗಳೂರು: ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.

ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಏತನ್ಮಧ್ಯೆ, ಬುಧವಾರ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಘಟನೆಯ ಸ್ಥಳದಿಂದ ಒಟ್ಟು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page