top of page

ಮಹಾಕುಂಭ ಮೇಳ 'ಮೃತ್ಯು ಕುಂಭ'ವಾಗಿ ಮಾರ್ಪಟ್ಟಿದೆ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

  • Apr 8
  • 1 min read

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಸಾಬೀತುಪಡಿಸಲು ಬಿಜೆಪಿಗೆ ಸವಾಲೆಸೆದರು ಮತ್ತು ಇದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಹೇಳಿದರು.

ree

ಕೋಲ್ಕತ್ತಾ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿನ ಅವ್ಯವಸ್ಥೆಗಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

'ಮಹಾ ಕುಂಭವು 'ಮೃತ್ಯು ಕುಂಭ'ವಾಗಿ ಮಾರ್ಪಟ್ಟಿದೆ' ಎಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಂಗಳವಾರ ಹೇಳಿದರು.

'ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. 'ಮೇಳ'ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ' ಎಂದು ದೂರಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಸಾಬೀತುಪಡಿಸಲು ಬಿಜೆಪಿಗೆ ಸವಾಲೆಸೆದರು ಮತ್ತು ಇದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಹೇಳಿದರು.

'ಬಾಂಗ್ಲಾದೇಶಿ ಮೂಲಭೂತವಾದಿಗಳೊಂದಿಗೆ ಮಮತಾ ಕೈಜೋಡಿಸುತ್ತಿದ್ದಾರೆ' ಎಂದು ಆರೋಪಿಸಿದ ಬಿಜೆಪಿ ಶಾಸಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.


ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ಧರ್ಮವನ್ನು ಬಳಸುತ್ತಿದೆ. ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಬಿಜೆಪಿ ಶಾಸಕರು ದ್ವೇಷವನ್ನು ಹರಡಲು ಮತ್ತು ಜನರನ್ನು ವಿಭಜಿಸಲು ಬಿಡುವುದಿಲ್ಲ ಎಂದು ಹೇಳಿದರು.

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ರಾಜ್ಯದ ಕೆಲವು ಪ್ರದೇಶಗಳಲ್ಲಿ ದೇಶವಿರೋಧಿ ಚಟುವಟಿಕೆಗಳು ಹೆಚ್ಚಿವೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯೇ ಇದಕ್ಕೆ ಕಾರಣ. ಬಂಗಾಳದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚಿರುವ ಕೆಲವು ಪ್ರದೇಶಗಳಿವೆ ಎಂದು ಶನಿವಾರ ಆರೋಪಿಸಿದ್ದಾರೆ.

'ಕಳೆದ 2-3 ತಿಂಗಳುಗಳಲ್ಲಿ, ಅಸ್ಸಾಂ ಪೊಲೀಸರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅನೇಕ ಬಾಂಗ್ಲಾದೇಶಿಗಳು, ರೋಹಿಂಗ್ಯಾಗಳು ಮತ್ತು ಉಗ್ರಗಾಮಿಗಳನ್ನು ಬಂಧಿಸಿದ್ದಾರೆ. 50 ರಿಂದ 55 ವಿಧಾನಸಭಾ ಕ್ಷೇತ್ರಗಳು ಮತ್ತು 30 ರಿಂದ 35 ಪೊಲೀಸ್ ಠಾಣೆಗಳಲ್ಲಿ ಜನಸಂಖ್ಯೆ ಬದಲಾಗಿದೆ. ಇದಕ್ಕೆ ಮಮತಾ ಬ್ಯಾನರ್ಜಿ ನೇರ ಹೊಣೆ. ಅವರು ಬಂಗಾಳದಲ್ಲಿ ಗೃಹ ಸಚಿವರಾಗಿ ವಿಫಲರಾಗಿದ್ದಾರೆ' ಎಂದು ಅವರು ಹೇಳಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page