top of page

ಮಹಾಲಿಂಗಪುರ | ಸಮರ್ಥ್ ಯೋಜನೆಯಡಿ ಶಿಬಿರ ಆಯೋಜನೆ: ಕೈಮಗ್ಗ ಉದ್ಯಮಕ್ಕೆ ಉತ್ತೇಜನ

  • Apr 8
  • 1 min read
ree









ಮಹಾಲಿಂಗಪುರ: ನಶಿಸಿ ಹೋಗುತ್ತಿರುವ ಕೈಮಗ್ಗ ನೇಕಾರಿಕೆಯನ್ನು ಉಳಿಸಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪಟ್ಟಣದ ಡಚ್ ಬಡಾವಣೆಯ ಬಳಿ ನೇಕಾರರಿಗೆ ಉಚಿತವಾಗಿ ಕೈಮಗ್ಗ ತರಬೇತಿ ನೀಡಲಾಗುತ್ತಿದೆ.

ಸೌಜನ್ಯ ಕೈಮಗ್ಗ ನೇಕಾರರ ಸಹಕಾರಿ ಸಂಘ, ಬೆಂಗಳೂರಿನ ನೇಕಾರ ಸೇವಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯದ 'ಸಮರ್ಥ್ ಯೋಜನೆ'ಯಡಿ ಈ ಶಿಬಿರ ಆಯೋಜಿಸಲಾಗಿದ್ದು, ನೇಕಾರ ಸಮಾಜದ 30 ಮಹಿಳೆಯರು ಕೈಮಗ್ಗ ತರಬೇತಿ ಪಡೆಯುತ್ತಿದ್ದಾರೆ.

'ಸಮರ್ಥ್ ಯೋಜನೆ' ಕೈಮಗ್ಗ ಉತ್ಪಾದನೆ ಮತ್ತು ಅದರ ಸಂಬಂಧಿತ ಚಟುವಟಿಕೆಗಳಲ್ಲಿ ಉದ್ಯೋಗಾವಕಾಶ ಸುಧಾರಿಸಲು ಕೇಂದ್ರ ಸರ್ಕಾರವು ಆರಂಭಿಸಿರುವ ಯೋಜನೆಯಾಗಿದೆ.

10 ಕೈಮಗ್ಗಗಳನ್ನು ಸ್ಥಾಪಿಸಿ, 45 ದಿನಗಳವರೆಗೆ ಸ್ಟೈಫಂಡ್‌ನೊಂದಿಗೆ ಕೈಮಗ್ಗ ತರಬೇತಿ ನೀಡಲಾಗುತ್ತಿದೆ. ಬಳಿಕ ಅವರಿಗೆ ಕೈಮಗ್ಗ ಉದ್ಯೋಗ ಕಲ್ಪಿಸುವ ಗುರಿಯನ್ನೂ ಹೊಂದಲಾಗಿದೆ. ಶಿಬಿರದಲ್ಲಿ ಹತ್ತಿಯಿಂದ ತಯಾರಿಸಿದ ಟವೆಲ್, ಲುಂಗಿ, ಕರವಸ್ತ್ರ, ಶರ್ಟ್‌ ಬಟ್ಟೆ ಮತ್ತಿತರ ಕೈಮಗ್ಗದ ಉತ್ಪನ್ನಗಳು ತಯಾರಾಗುತ್ತಿವೆ. ಒಬ್ಬರು ತರಬೇತುದಾರ, ಇಬ್ಬರು ಸಹಾಯಕ ತರಬೇತುದಾರರು ತರಬೇತಿ ನೀಡುತ್ತಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಶಿಬಿರ ಆರಂಭಗೊಂಡಿದ್ದು, ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ.

'ಈ ಮೊದಲು ನನಗೆ ಕೈಮಗ್ಗದ ಬಗ್ಗೆ ತಿಳಿದಿರಲಿಲ್ಲ. ಇಲ್ಲಿಗೆ ಬಂದ ನಂತರ ಕೈಮಗ್ಗದ ಪರಿಚಯವಾಯಿತು. ನೇಕಾರಿಕೆ ಉದ್ಯೋಗದಲ್ಲಿ ತೊಡಗಿಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಬಹುದು ಎಂಬ ಆತ್ಮವಿಶ್ವಾಸ ಬಂದಿದೆ. ಪುರಾತನ ಕೈಗಾರಿಕೆಗಳಲ್ಲೊಂದಾದ ಕೈಮಗ್ಗ ಉದ್ಯಮಕ್ಕೆ ಉತ್ತೇಜನ ಸಿಗಬೇಕಿದೆ' ಎನ್ನುತ್ತಾರೆ ಶಿಬಿರಾರ್ಥಿ ಸುರೇಖಾ ಹಾಸಿಲಕರ.

ಮಹಾಲಿಂಗಪುರದಲ್ಲಿ ಕೈಮಗ್ಗ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳುಮಹಾಲಿಂಗಪುರದಲ್ಲಿ ಕೈಮಗ್ಗ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳುಜಿ.ಎಸ್. ಗೊಂಬಿ ಸೌಜನ್ಯ ಕೈಮಗ್ಗ ನೇಕಾರರ ಸಹಕಾರ ಸಂಘದ ಅಧ್ಯಕ್ಷ ಸಮರ್ಥ್ ಯೋಜನೆ ಮೂಲಕ ನೇಕಾರ ಸಮಾಜದ ಮಹಿಳೆಯರನ್ನು ಗುರುತಿಸಿ ಅವರಿಗೆ ಸವಲತ್ತು ತರಬೇತಿ ನೀಡಿ ಆರ್ಥಿಕ ಸ್ವಾವಲಂಬನೆ ಬೆಳೆಸಲಾಗುತ್ತಿದೆ

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page