top of page

ಯುವತಿಯರ Swimming ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಸಾವು

  • Apr 8
  • 1 min read

ಅಕ್ಟೋಬರ್ 26 ರಂದು ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಾಲೇಜಿನಲ್ಲಿ ದೀಪಾವಣಿ ರಜೆ ನೀಡಿದ್ದರಿಂದ ಹೊರಗೆ ಹೋಗಲು ನಿರ್ಧರಿಸಿದ್ದರು.


ree









ಬೆಂಗಳೂರು: ವೀಕೆಂಡ್ ಕಳೆಯಲು ರಾಮನಗರ ಬಳಿಯ ನಗರದ ಹೊರವಲಯದಲ್ಲಿರುವ ಫಾರ್ಮ್‌ಹೌಸ್‌ಗೆ ತೆರಳಿದ್ದ ಬಸವೇಶ್ವರನಗರದ ಏಳು ಮಂದಿ ಪದವಿ ವಿದ್ಯಾರ್ಥಿಗಳ ಗುಂಪಿನ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಅಕ್ಟೋಬರ್ 26 ರಂದು ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಇದೀಗ ಹಲ್ಲೆಗೊಳಗಾದವರಲ್ಲಿ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಪ್ರಕರಣ ಪೊಲೀಸರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಪುನೀತ್ (21) ಮೃತ ವಿದ್ಯಾರ್ಥಿ. ಈತ ಬಸವೇಶ್ವರನಗರದ ಖಾಸಗಿ ಕಾಲೇಜಿನಲ್ಲಿ ಬಿಕಾಂ ವಿದ್ಯಾರ್ಥಿಯಾಗಿದ್ದ, ಅಕ್ಟೋಬರ್ 26 ರಂದು ಚಿಕ್ಕನಹಳ್ಳಿಯ ಎಪಿಎಸ್ ಲೇಔಟ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಾಲೇಜಿನಲ್ಲಿ ದೀಪಾವಣಿ ರಜೆ ನೀಡಿದ್ದರಿಂದ ಹೊರಗೆ ಹೋಗಲು ನಿರ್ಧರಿಸಿದ್ದರು.

ವಿದ್ಯಾರ್ಥಿಯೊಬ್ಬನಿಗೆ ಮಾಲೀಕನ ಪರಿಚಯವಿದ್ದ ಕಾರಣ ಅವರು ತೋಟದ ಮನೆಗೆ ಹೋಗಿದ್ದರು. ಈ ವೇಳೆ ತಂಡದಲ್ಲಿದ್ದ ಇಬ್ಬರು ಹುಡುಗಿಯರು ಅಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಇತರರು ಅಂತಕ್ಷರಿ ಆಡುತ್ತಿದ್ದರು. ಹೊರಗಿನಿಂದ ಯಾರೋ ಬಾಗಿಲು ಬಡಿಯುತ್ತಿದ್ದಂತೆ ಒಬ್ಬ ವಿದ್ಯಾರ್ಥಿನಿ ಎದ್ದು ಹೋಗಿ ಬಾಗಿಲು ತೆರೆದಿದ್ದಾಳೆ.


ಈ ವೇಳೆ ಸ್ಥಳೀಯರು ಎಂದು ಹೇಳಿಕೊಂಡು ಮೂವರು ಆರೋಪಿಗಳು ಒಳಗೆ ನುಗ್ಗಿ ನಮ್ಮನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೂಗಾಡಲು ಪ್ರಾರಂಭಿಸಿದ್ದು, ಇಲ್ಲಿಗೆ ಬರಲು ನಿಮಗೆ ಅನುಮತಿ ನೀಡಿದವರು ಯಾರು ಎಂದು ಕೇಳಿ ನಿಂದಿಸಲು ಪ್ರಾರಂಭಿಸಿದ್ದಾರೆ. ಬಳಿಕ ಆರೋಪಿಗಳು ಹುಡುಗಿಯರ ಫೋಟೋ ತೆಗೆಯಲು ಪ್ರಾರಂಭಿಸಿದ್ದಾರೆ. ಇತರ ವಿದ್ಯಾರ್ಥಿಗಳು ಅವರನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿಗಳು ಮರದ ದಿಮ್ಮಿಗಳಿಂದ ವಿದ್ಯಾರ್ಥಿಗಳ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಕೊನೆಯುಸಿರೆಳೆದಿದ್ದಾನೆ.

ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳಾದ ಚಂದ್ರು, ನಾಗೇಶ್ ಮತ್ತು ಮುರಳಿ ಎಂಬುವವರನ್ನು ಬಂಧನಕ್ಕೊಳಪಡಿಸಿದ್ದು, ರಾಮನಗರ ಗ್ರಾಮಾಂತರ ಪೊಲೀಸರು ಕೊಲೆ ಪ್ರಕರಣ ಸೇರಿದಂತೆ ಇತರೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page