top of page

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಿ: ಹೈಕಮಾಂಡ್ ಗೆ ಬಿಜೆಪಿ ಸಂಸದ ಸುಧಾಕರ್ ಆಗ್ರಹ

  • Apr 8
  • 2 min read

ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು ಬಹಿರಂಗವಾಗಿಯೇ ಗುಡುಗಿದ್ದಾರೆ.

ree

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹಾಗೂ ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು ಬಹಿರಂಗವಾಗಿಯೇ ಗುಡುಗಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದ ಆರೋಪಿಸಿದ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಸುಧಾಕರ್ ಅವರು, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ಕೆ. ಸುಧಾಕರ್ ಅವರು ವಿಜಯೇಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.


ತಮಗೆ ಬೇಕಾದವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರನ್ನು ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದರು.

ಬಿಜೆಪಿಯನ್ನು ನಂಬಿ ಇಲ್ಲಿ ಆಂತರಿಕ ಪ್ರಜಾಪ್ರಭುತ್ವ, ಆರ್​ಎಸ್​ಎಸ್ ಆದರ್ಶ ಇದೆ ಎಂದು ಪಕ್ಷದ ತತ್ವ ಸಿದ್ದಾಂತ ಒಪ್ಪಿ ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡಿದೆ. ಬಿಜೆಪಿಗೆ ಮರಳು ಭೂಮಿಯಂತಿದ್ದ ಚಿಕ್ಕಬಳ್ಳಾಪುರದಲ್ಲಿ ನನ್ನ ರಾಜಕೀಯ ಭವಿಷ್ಯವನ್ನು ಒತ್ತೆ ಇಟ್ಟು ಬಿಜೆಪಿ ಸೇರಿದ್ದೆ. ಯಡಿಯೂರಪ್ಪನವರನ್ನು ಸಿಎಂ ಮಾಡಬೇಕು ಎಂದು 17 ಜನ ಬಿಜೆಪಿಗೆ ಬಂದೆವು. ಯಡಿಯೂರಪ್ಪನವರು ರಾಜೀನಾಮೆ ಕೊಟ್ಟ ಮೇಲೆ ಬೊಮ್ಮಾಯಿ‌ ಅವರ ಜೊತೆ ಕೂಡಾ ಅಷ್ಟೇ ವಿಶ್ವಾಸದಿಂದ ಕೆಲಸ ಮಾಡಿದ್ದೇನೆ. ಅಂತಿಮವಾಗಿ ನನಗೆ ಬಿಜೆಪಿ ತತ್ವ ಸಿದ್ದಾಂತ ಅಷ್ಟೇ ಮುಖ್ಯ. ಪಕ್ಷ ಏನು ಹೇಳಿದೆಯೋ ಅದನ್ನು ಮಾಡಿಕೊಂಡು ಬಂದಿದ್ದೇನೆ. ಒಂದು ಬಾರಿ ನನಗೆ ಚಿಕ್ಕಬಳ್ಳಾಪುರದಲ್ಲಿ ಆಘಾತ ಆಯಿತು. ಇವತ್ತು ಪಕ್ಷ ಕಟ್ಟುತ್ತೇವೆ ಎಂದು ಹೊರಟಿದ್ದವರು ಟಾರ್ಗೆಟ್ ಮಾಡಿ ಸೋಲಿಸುವಂತಹ ಪ್ರಯತ್ನ ಮಾಡಿದರು ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.


ಯಾರನ್ನೂ ವಿಶ್ವಾಸಕ್ಕೆ ತೆಗದುಕೊಳ್ಳುವ ಜಾಯಮಾನ ಅವರದ್ದು ಅಲ್ಲ. ಇವರ ದರ್ಪ, ಇವರ ಅಹಂಕಾರ. ಅವರ ಹತ್ತಿರ ಸಾವಿರಾರು ಕೋಟಿ ಇರಬಹುದು. ಇವರ ಹಿಂಬಾಲಕರು ನನ್ನ ಸೋಲಿಸಲು ಪ್ರಯತ್ನ ಪಟ್ಟರು. ಜಿಲ್ಲಾಧ್ಯಕ್ಷರ ವಿಚಾರಕ್ಕೆ ಸೌಜನ್ಯಕ್ಕೂ ನನ್ನ ಜೊತೆ ಚರ್ಚೆ ಮಾಡಿಲ್ಲ. ಫೋನ್ ಮಾಡಿದರೂ ರೆಸ್ಪಾಂಡ್ ಮಾಡಲ್ಲ. ನಡ್ಡಾ ಅವರಿಗೆ ಮೆಸೇಜ್ ಹಾಕಿದರೆ ಅಪಾಯಿಂಟ್ ಮೆಂಟ್ ಕೊಡುತ್ತಾರೆ. ಆದ್ರೆ, ಇವರು ಎರಡು ಮೂರು ಬಾರಿ ಅಪಾಯಿಂಟ್ ಮೆಂಟ್ ಫಿಕ್ಸ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ನಮ್ಮನ್ನು ತುಳಿಯಲು, ಸಮಾಧಿ ಮಾಡಲು ಹೊರಟಿದ್ದೀರಾ? ಎಂದು ವಿಜಯೇಂದ್ರರನ್ನು ಖಾರವಾಗಿಯೇ ಪ್ರಶ್ನಿಸಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page