top of page

ಲೈಂಗಿಕ ಕಿರುಕುಳ ದೂರುಗಳಿಗೆ ಪರಿಹಾರ: 'ಪಾಶ್ ಸಮಿತಿ' ರಚನೆ ನಿರ್ಧಾರ ಮುಂದೂಡಿಕೆ- ಕವಿತಾ ಲಂಕೇಶ್

  • Apr 8
  • 1 min read

ಕವಿತಾ ಲಂಕೇಶ್ ಅವರು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ನ ಅಧ್ಯಕ್ಷರಾಗಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಮಹಿಳಾ ಹಕ್ಕುಗಳು ಮತ್ತು ದುರುಪಯೋಗದ ವಿರುದ್ಧ ಹೋರಾಡುತ್ತಿದೆ. ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯದ ಕುರಿತು ನ್ಯಾ. ಹೇಮಾ ಸಮಿತಿ ವರದಿ ನೀಡಿದ ಬಳಿಕ ಕರ್ನಾಟಕದಲ್ಲಿಯೂ ಅಂತಹ ಸಮಿತಿ ರಚಿಸಬೇಕು ಎಂದು FIRE ಒತ್ತಾಯಿಸಿತ್ತು.

ree









ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ದೂರುಗಳನ್ನು ಪರಿಹರಿಸಲು ತನ್ನ ನೇತೃತ್ವದಲ್ಲಿ ಪಾಶ್ ಸಮಿತಿ ರಚಿಸುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ನಿರ್ದೇಶಕಿ ಕವಿತಾ ಲಂಕೇಶ್ ಮಂಗಳವಾರ ಹೇಳಿದ್ದಾರೆ. ಲೈಂಗಿಕ ಕಿರುಕುಳ ತಡೆ (PoSH) ಕಾಯ್ದೆಯಡಿ ಕೆಎಫ್‌ಸಿಸಿ ಡಿಸೆಂಬರ್ 1 ರಂದು 10 ಸದಸ್ಯರ ಆಂತರಿಕ ಸಮಿತಿಯನ್ನು ರಚಿಸಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಕವಿತಾ ಲಂಕೇಶ್ ಅವರು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ನ ಅಧ್ಯಕ್ಷರಾಗಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಮಹಿಳಾ ಹಕ್ಕುಗಳು ಮತ್ತು ದುರುಪಯೋಗದ ವಿರುದ್ಧ ಹೋರಾಡುತ್ತಿದೆ. ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯದ ಕುರಿತು ನ್ಯಾ. ಹೇಮಾ ಸಮಿತಿ ವರದಿ ನೀಡಿದ ಬಳಿಕ ಕರ್ನಾಟಕದಲ್ಲಿಯೂ ಅಂತಹ ಸಮಿತಿ ರಚಿಸಬೇಕು ಎಂದು FIRE ಒತ್ತಾಯಿಸಿತ್ತು.

ಸಭೆಯಲ್ಲಿ ಸಮಿತಿಯ ನೇತೃತ್ವವನ್ನು ನನಗೆ ವಹಿಸಲು ನಿರ್ಧರಿಸಲಾಯಿತು. ಆದರೆ, ಆದರೆ ಇದೀಗ ಹೊಸ ಪದಾಧಿಕಾರಿಗಳ ಆಯ್ಕೆ ಬಾಕಿ ಉಳಿದಿರುವುದರಿಂದ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದರು.


ಡಿಸೆಂಬರ್ 15 ರಂದು ಚುನಾವಣೆಯ ನಂತರ ಕೆಎಫ್‌ಸಿಸಿ ಸಭೆ ನಡೆಯಲಿದ್ದು, ಡಿಸೆಂಬರ್ 16 ರಂದು ಸಮಿತಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನನಗೆ ತಿಳಿಸಲಾಗಿದೆ. ಆದರೆ ನನ್ನನ್ನು ಸಮಿತಿಯ ಮುಖ್ಯಸ್ಥೆಯಾಗಿ ನೇಮಕ ಮಾಡಿರುವುದಕ್ಕೆ KFCCಯ ಕೆಲ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ನನಗೆ ತಿಳಿದಿರುವ ಕೆಲ ಸದಸ್ಯರು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ನಟಿಯರಾದ ಪ್ರಮೀಳಾ ಜೋಷಾಯ್ ಮತ್ತು ಶ್ರುತಿ ಹರಿಹರನ್, ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ರಾಜ್ಯ ಸಂಯೋಜಕ ಮಲ್ಲು ಕುಂಬಾರ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಕೆ.ಎಸ್. ವಿಮಲಾ ,ಪತ್ರಕರ್ತ ಮುರಳೀಧರ ಖಜಾನೆ, ನಿರ್ಮಾಪಕ ಸಾ.ರಾ.ಗೋವಿಂದ, ನಾಟಕಕಾರ ಶಶಿಕನಿ ಯಡಹಳ್ಳಿ, ವಕೀಲೆ ರಾಜಲಕ್ಷ್ಮಿ ಅಂಕಲಗಿ, KFCC ಅಧ್ಯಕ್ಷ ಎನ್‌ಎಂ ಸುರೇಶ್ ಸೇರಿದಂತೆ ಇತರರು ಸಮಿತಿಯಲ್ಲಿದ್ದಾರೆ.


ಕವಿತಾ ಲಂಕೇಶ್ ಸಮಿತಿ ನೇತೃತ್ವ ವಹಿಸುವ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಸುರೇಶ್ ಕೂಡಾ ಪಿಟಿಐಗೆ ಖಚಿತಪಡಿಸಿದ್ದಾರೆ. ನನ್ನ ಅವಧಿ ಮುಗಿಯುತ್ತಿರುವ ಕಾರಣ ಈ ಆದೇಶಕ್ಕೆ ಸಹಿ ಹಾಕುವ ಹಕ್ಕು ನನಗಿಲ್ಲ. ಚುನಾವಣೆ ನಡೆಯುತ್ತಿರುವುದರಿಂದ ನೂತನ ಪದಾಧಿಕಾರಿಗಳು ಅಧಿಕಾರ ವಹಿಸಿಕೊಳ್ಳುವವರೆಗೆ ಕಾಯ್ದು ಆದೇಶ ಹೊರಡಿಸಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು. ಆದರೆ,ಲಂಕೇಶ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲು ಕೆಎಫ್‌ಸಿಸಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page