top of page

ಶಾಲೆಯ ಅಭಿವೃದ್ಧಿಗೆ ಮುಂದಾದ ಹಿರಿಯ ವಿದ್ಯಾರ್ಥಿಗಳು: ಸ್ವಾಮೀಜಿ ಮೆಚ್ಚುಗೆ

  • Apr 8
  • 1 min read

ಹಿರಿಯೂರು: 'ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಅಕ್ಷರದ ಅರಿವು ಮೂಡಿಸಿರುವ ಶಾಲೆಯ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಿರುವುದು ಶ್ಲಾಘನೀಯ' ಎಂದು ಚಿತ್ರದುರ್ಗದ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ಹೇಳಿದರು.

ree








ತಾಲ್ಲೂಕಿನ ಐಮಂಗಲ ಗ್ರಾಮದ ಹೊರವಲಯದಲ್ಲಿರುವ ಎಸ್‌ವಿಎಸ್ ಪ್ರೌಢಶಾಲೆಯ ಆವರಣದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

'ಶಾಲೆಯ ಅಗತ್ಯಗಳಿಗೆ ಸರ್ಕಾರ ಹಾಗೂ ಇತರರನ್ನು ಅವಲಂಬಿಸದೇ ಗ್ರಾಮಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಒಂದಾಗಿ ತಾವು ವಿದ್ಯಾಭ್ಯಾಸ ಮಾಡಿದ ಶಾಲೆಯ ಅಭಿವೃದ್ಧಿಗೆ ಮುಂದಾಗುವುದು ಎಲ್ಲರಿಗೂ ಮಾದರಿ. ಶಾಲೆಯಲ್ಲಿ ಗುಣಮಟ್ಟದ ಪಾಠೋಪಕರಣ, ಉತ್ತಮ ಬೋಧನಾ ಕೊಠಡಿಗಳಿದ್ದರೆ ವಿದ್ಯಾರ್ಥಿಗಳ ಕಲಿಕೆಯಲ್ಲಿ ಪ್ರಗತಿ ಕಾಣಬಹುದು. ನೂತನವಾಗಿ ಮೂರು ಕೊಠಡಿಗಳ ನಿರ್ಮಾಣವನ್ನು ಕೈಗೆತ್ತಿಕೊಂಡಿದ್ದು, ಈ ಕಾರ್ಯಕ್ಕೆ ಮಠದ ವತಿಯಿಂದಲೂ ಸಹಕಾರ ನೀಡಲಾಗುವುದು' ಎಂದು ಸ್ವಾಮೀಜಿ ಭರವಸೆ ನೀಡಿದರು.

'ಸಮಾಜಕ್ಕೆ ಪ್ರಯೋಜನಕಾರಿಯಾದ ಕಾರ್ಯಗಳನ್ನು ಮಾಡಲು ಸಮಯಕ್ಕೆ ಕಾಯಬಾರದು. ಹಳೆಯ ವಿದ್ಯಾರ್ಥಿಗಳು ಮಾಡಲು ಹೊರಟಿರುವ ಉಪಕಾರವನ್ನು ಸಮಾಜ ಸದಾ ಸ್ಮರಿಸುತ್ತದೆ. ಈ ಶಾಲೆಯು ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನಾರ್ಜನೆಗೆ ಸಹಕಾರಿಯಾಗಲಿ' ಎಂದು ಆಶಿಸಿದರು.

ಮುಖ್ಯಶಿಕ್ಷಕ ಎಸ್.ಎ.ಅಶೋಕ, ಹಿರಿಯ ವಿದ್ಯಾರ್ಥಿ ಸಂಘದ ಬಿ.ಕೆ.ಶಿವಶಂಕರಪ್ಪ, ಕೆ.ಎಂ.ಓಂಕಾರಪ್ಪ, ಟಿ.ಎಲ್.ಬಸವರಾಜಪ್ಪ, ಎಂ.ಮೂರ್ಕಣ್ಣಪ್ಪ, ಎಸ್.ಗುರುಸಿದ್ದಪ್ಪ, ಸಿ.ರಾಧಾಕೃಷ್ಣ, ಓಂಕಾರಮ್ಮ, ಕವಿತಾ, ಅರವಿಂದ, ಓಂಕಾರಯ್ಯ, ಎಂಜಿನಿಯರ್ ಸಿದ್ದಪ್ಪ, ಸಹಶಿಕ್ಷಕರಾದ ಟಿ.ರಮೇಶ್, ಶಿವಮೂರ್ತಿ, ಅತಿಥಿ ಶಿಕ್ಷಕರಾದ ಎಲ್.ಆರ್.ಕಾರ್ತಿಕ್, ಎಸ್.ಆರ್.ರಮ್ಯಶ್ರೀ, ಒ.ಸುಧಾ, ಸಿಬ್ಬಂದಿ ಡಿ.ಮಲ್ಲಿಕಾರ್ಜುನ, ಶಾರದಮ್ಮ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page