top of page

ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ, ನಿಮಗ್ಯಾಕೆ ಭಯ, ಟೆನ್ಶನ್?: BSY, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

  • Apr 8
  • 1 min read

ವಕ್ಫ್ ವಿರುದ್ಧದ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿರುವ ಯತ್ನಾಳ್, ಇಲ್ಲಿ ಯಾರೂ ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ, ಟೆನ್ಶನ್ ಎಂದು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಪ್ರಶ್ನಿಸಿದ್ದಾರೆ.

ree









ಕಲಬುರಗಿ: ಬಿಜೆಪಿಯಲ್ಲಿನ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಪ್ರತ್ಯೇಕವಾಗಿ ಚಾಲನೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಕ್ಫ್ ವಿರುದ್ಧದ ಹೋರಾಟ ಮಾಡುತ್ತಿರುವ ಬಗ್ಗೆ ಮಾತನಾಡಿರುವ ಯತ್ನಾಳ್, ಇಲ್ಲಿ ಯಾರೂ ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ, ಟೆನ್ಶನ್ ಎಂದು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಪ್ರಶ್ನಿಸಿದ್ದಾರೆ.

ವಕ್ಪ್‌ ವಿರುದ್ಧದ ಹೋರಾಟ ಅಧಿಕಾರ, ಅಂತಸ್ತು, ಹುದ್ದೆ ಮೇಲೆ ಕಣ್ಣಿಟ್ಟು ಆರಂಭಿಸಿದ್ದಲ್ಲ ಯಾರೂ ಸ್ವಾರ್ಥಕ್ಕಾಗಿ ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಯಾವುದೇ ಕುಟುಂಬವನ್ನು ಮುಗಿಸಲು ನಾವು ಹೋರಾಟ ಮಾಡುತ್ತಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ನನ್ನ ಬಗ್ಗೆ ಕಠಿಣ ಕ್ರಮ ಕೈಗೊಳ್ತೇವೆ ಅಂತಾರೆ ಯಾಕೆ ಕ್ರಮ ಕೈಗೊಳ್ತಿರಾ? ಎಂದು ಯತ್ನಾಳ್ ವಿಜಯೇಂದ್ರ, ಬಿಎಸ್ ವೈ ಗೆ ಸವಾಲು ಹಾಕಿದ್ದಾರೆ. ನಾವು ಕಲಬುರಗಿ ಬಳಿಕ ಬೆಳಗಾವಿಯಲ್ಲಿ ಬೃಹತ್ ಹೋರಾಟ ಮುಗಿಸಿ ದೆಹಲಿಗೆ ಹೋಗುತ್ತೇವೆ. ಡಿ. 3-4 ರಂದು ದೆಹಲಿಗೆ ಹೋಗಿ ವಕ್ಪ್ ವಿರುದ್ದ ವರದಿ ನೀಡ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.


ಮೊದಲ ದಿನದಿಂದಲೂ ವಿಜಯೇಂದ್ರ ನಾಯಕತ್ವ ಒಪ್ಪಿಕೊಂಡಿಲ್ಲ: ರಮೇಶ್ ಜಾರಕಿಹೊಳಿ

ಯಡಿಯೂರಪ್ಪ, ವಿಜಯೇಂದ್ರ ಸಿಎಂ ಮನೆಯಲ್ಲಿರುತ್ತಾರೆ!

ಬಿ.ವೈ.ವಿಜಯೇಂದ್ರ ಹೋರಾಟ ಮಾಡಲ್ಲ. ವಿಜಯೇಂದ್ರ ವಕ್ಫ್​​ ವಿರುದ್ಧ ಯಾವ ಹೋರಾಟ ಮಾಡಿದ್ದಾರೆ? ಯಾವ ರೈತರ ಮನವಿ ಸ್ವೀಕರಿಸಿದ್ದಾನೆ ತೋರಿಸಿ. ರಾತ್ರಿಯಾದ್ರೆ ಸಾಕು ಡಿಕೆ-ಸಿದ್ದರಾಮಯ್ಯ ಮನೆಯಲ್ಲಿ ಇರ್ತಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನೂರೆಂಟು ಕೇಸ್ ಇದೆ. ಕಾಪಾಡೋ ಶಿವಪ್ಪ ಅಂತಾ ಡಿಸಿಎಂ ಮನೆಯಲ್ಲಿ ಇರ್ತಾರೆ. ಕಾಪಾಡೋ ಸಿದ್ದರಾಮಯ್ಯ ಅಂತಾ ಅವರ ಮನೆಯಲ್ಲಿಯೂ ಇರ್ತಾರೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಮುಂದೆ ಟಿಕೆಟ್ ಕೊಡುವ ಅಧಿಕಾರ ನಮಗೆ ಬರುತ್ತೆ‌. ಹೈಕಮಾಂಡ್ ಗೆ ನನ್ನ ವಿರುದ್ದ ಪತ್ರ ಬರೆಯುತ್ತಿರುವುದು ಹೊಸದೇನೂ ಅಲ್ಲ‌. ನನ್ನ ವಿರುದ್ದ ನೀಡಿರುವ ದೂರುಗಳೇ ಒಂದು ರೂಮ್ ತುಂಬಿವೆ‌. ಆದರೆ ನನ್ನನ್ನು ಏನು ಮಾಡುವುದಕ್ಕೆ ಆಗುವುದಿಲ್ಲ ಎಂದು ವಿಜಯೇಂದ್ರಗೆ ಯತ್ನಾಳ್ ಟಾಂಗ್ ನೀಡಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page